Library-logo-blue-outline.png
View-refresh.svg
Transclusion_Status_Detection_Tool

ಕಲ್ಪಿತವೆಂಬ ಭಕ್ತ ಮಾಡಿದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಕಲ್ಪಿತವೆಂಬ ಭಕ್ತ ಮಾಡಿದ ಸಯಧಾನವ ನೋಡಾ ! ಅನಂತಕೋಟಿ ಅಜಾಂಡಗಳೆ ಸಯಧಾನವಾಗಿ ಸವಿಕಲ್ಪ ವಿಷಯಂಗಳೆ ಶಾಕವಾಗಿ ಸರ್ವವಾಸನೆ ಎಂಬುದೆ ಅಭಿಘಾರವಾಗಿ_ ಇವೆಲ್ಲವನೂ ಜ್ಞಾನವೆಂಬ ಭಾಜನದಲ್ಲಿ ಎಡೆಮಾಡುತ್ತಿರಲು ಉಣ ಬಂದ ಹಿರಿಯರು ಉಣುತ್ತಿದ್ದುದ ನೋಡಿರೆ ! ನಿರ್ವಿಕಲ್ಪಿತವೆಂಬ ಮಹಂತ ಬರಲು
ಸಯಧಾನವಡಗಿತ್ತು
ಭಾಜನ ಉಳಿಯಿತ್ತು. ಆ ಭಾಜನವನುತ್ತಮಾಂಗದಲ್ಲಿ ಅಳವಡಿಸಿಕೊಳಲು ನಿಶ್ಚಿಂತವಾಯಿತ್ತು ಗುಹೇಶ್ವರಾ.