ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ ಉಂಬ ಜಂಗಮ ಬಂದಡೆ ನಡೆಯೆಂಬರು ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ. ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ194