ಕಲ್ಲ ಮನೆಯ ಮಾಡಿ ಕಲ್ಲ ದೇವರ ಮಾಡಿ ಆ ಕಲ್ಲು ಕಲ್ಲ ಮೇಲೆ ಕೆಡೆದಡೆ ದೇವರೆತ್ತ ಹೋದರೊ ? ಲಿಂಗಪ್ರತಿಷ್ಠೆಯ ಮಾಡಿದವಂಗೆ ನಾಯಕನರಕ-ಗುಹೇಶ್ವರಾ