ವಿಷಯಕ್ಕೆ ಹೋಗು

ಕಲ್ಲ ಹೋರಿನೊಳಗೊಂದು ಕಾರ್ಯವ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕಲ್ಲ ಹೋರಿನೊಳಗೊಂದು ಕಾರ್ಯವ ಕಾಬಡೆ
ಕಲ್ಲ ಬೆದಕದೆ ಕಪ್ಪೆಯ ಸೋಂಕದೆ ಅಲ್ಲಿಯ ಉದಕವ ಕುಡಿಯ ಬಲ್ಲಡೆ_ಅದು ಯೋಗ. ಬಲ್ಲಡೆ ನಿಮ್ಮಲ್ಲಿ ನೀವೆ ತಿಳಿದು ನೋಡಿರೆ. ಅರಿವ ಯೋಗಕ್ಕಿದು ಚಿಹ್ನವಯ್ಯಾ: ಕಲ್ಲು ಕಪ್ಪೆಯೊಳಗಣ ಹುಲ್ಲುರಿಯದೆ ಅಟ್ಟುಂಬಂತೆ ಗುಹೇಶ್ವರಾ.