ಕಳಬೇಡ, ಕೊಲಬೇಡ, ಹುಸಿಯ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಳಬೇಡ
ಕೊಲಬೇಡ
ಹುಸಿಯ ನುಡಿಯಲು ಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲು ಬೇಡ. ಇದೇ ಅಂತರಂಗಶುದ್ಧಿ
ಇದೇ ಬಹಿರಂಗಶುದ್ಧಿ ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ. 235