ಕಳವಳದ ಮನ ತಲೆಕೆಳಗಾದುದವ್ವಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಳವಳದ ಮನ ತಲೆಕೆಳಗಾದುದವ್ವಾ ; ಸುಳಿದು ಬೀಸುವ ಗಾಳಿ ಉರಿಯಾದುದವ್ವಾ ; ಬೆಳುದಿಂಗಳು ಬಿಸಿಯಾಯಿತ್ತು ಕೆಳದಿ. ಹೊಳಲ ಸುಂಕಿಗನಂತೆ ತೊಳಲುತ್ತಿದ್ದೆನವ್ವಾ ; ತಿಳುಹಾ
ಬುದ್ಧಿಯ ಹೇಳಿ ಕರೆತಾರೆಲಗವ್ವಾ ; ಚೆನ್ನಮಲ್ಲಿಕಾರ್ಜುನಂಗೆ ಎರಡರ ಮುನಿಸವ್ವಾ.