ಕಾಣಬಾರದ ಗುರು ಕಣ್ಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಣಬಾರದ ಗುರು ಕಣ್ಗೆ ಗೋಚರವಾದಡೆ;_ ಹೇಳಲಿಲ್ಲದ ಬಿನ್ನಪ್ಪ
ಮುಟ್ಟಲಿಲ್ಲದ ಹಸ್ತಮಸ್ತಕಸಂಯೋಗ. ಹೂಸಲಿಲ್ಲದ ವಿಭೂತಿಯ ಪಟ್ಟ
ಕೇಳಲಿಲ್ಲದ ಕರ್ಣಮಂತ್ರ. ತುಂಬಿ ತುಳುಕದ ಕಲಶಾಭಿಷೇಕ ಆಗಮವಿಲ್ಲದ ದೀಕ್ಷೆ
ಪೂಜೆಗೆ ಬಾರದ ಲಿಂಗ
ಸಂಗವಿಲ್ಲದ ಸಂಬಂಧ. ಸ್ವಯವಪ್ಪ ಅನುಗ್ರಹ
ಅನುಗೊಂಬಂತೆ ಮಾಡಾ ಗುಹೇಶ್ವರಾ.