ಕಾಪ ಕಾಷಾಯಾಂಬರವ ಕಟ್ಟಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಪ ಕಾಷಾಯಾಂಬರವ ಕಟ್ಟಿ
ಮಂಡೆ ಬೋಳಾದಡೇನಯ್ಯಾ. ಎನ್ನಲ್ಲಿ ನಿಜವಿಲ್ಲದನ್ನಕ್ಕ ? ಹೊನ್ನು ಹೆಣ್ಣು ಮಣ್ಣು ತ್ರಿವಿಧವ ತೊರೆದಡೇನಯ್ಯಾ ಮನದಲ್ಲಿ ವ್ರತಿಯಾಗದನ್ನಕ್ಕ ? ಹಸಿವು ತೃಷೆ ವ್ಯಸನಾದಿಗಳ ಬಿಟ್ಟಡೇನಯ್ಯಾ ಅರ್ಥದಿಚ್ಛೆ ಮನದಲ್ಲಿ ಹಿಂಗದನ್ನಕ್ಕ ? ಆನು ಜಂಗಮವೆ ? ಆನು ಹಿರಿಯನಾದೆನಲ್ಲದೆ ಆನು ಜಂಗಮವೆ ? ಒಡಲಿಲ್ಲದಾತ ಬಸವಣ್ಣ
ಪ್ರಾಣವಿಲ್ಲದಾತ ಬಸವಣ್ಣ. [ಎನ್ನ]ಬಸವಣ್ಣನಾಗಿ ಹುಟ್ಟಿಸದೆ ಪ್ರಭುವಾಗಿ ಏಕೆ ಹುಟ್ಟಿಸಿದೆ ಗುಹೇಶ್ವರಾ ?