ವಿಷಯಕ್ಕೆ ಹೋಗು

ಕಾಮನ ಕೈ ಮುರಿದಡೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕಾಮನ ಕೈ ಮುರಿದಡೆ ಮೋಹ ಮುಂದುಗೆಟ್ಟಿತ್ತು. ಆಮಿಷ ತಾಮಸಧಾರಿಗಳೆಲ್ಲ ಎಳತಟವಾದರು. ಅಕ್ಕಟಾ
ಅಯ್ಯಲಾ
ನಿಮ್ಮ ಕಂಡವರಾರೊ? ಆಳವಿಲ್ಲದ ಸ್ನೇಹಕ್ಕೆ ಮರಣವೆ ಮಹಾನವಮಿ. ಗುಹೇಶ್ವರನನರಿಯದೆ ರಣಭೂಮಿಗಳುಲಿದವು !