ಕಾಮಾರಿಯ ಗೆಲಿದನು ಬಸವಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಮಾರಿಯ ಗೆಲಿದನು ಬಸವಾ ನಿಮ್ಮಿಂದ. ಸೋಮಧರನ ಹಿಡಿತಪ್ಪೆನು ಬಸವಾ ನಿಮ್ಮ ಕೃಪೆಯಿಂದ. ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು ? ಭಾವಿಸಲು ಗಂಡು ರೂಪು ಬಸವಾ ನಿಮ್ಮ ದಯದಿಂದ. ಅತಿಕಾಮಿ ಚೆನ್ನಮಲ್ಲಿಕಾರ್ಜುನಂಗೆ ತೊಡರಿಕ್ಕಿ ಎರಡುವರಿಯದೆ ಕೂಡಿದೆನು ಬಸವಾ ನಿಮ್ಮ ಕೃಪೆಯಿಂದ.