Library-logo-blue-outline.png
View-refresh.svg
Transclusion_Status_Detection_Tool

ಕಾಮ್ಯ ಕಲ್ಪಿತಂಗಳಿಲ್ಲದೆ, ನಿಮ್ಮಿಂದ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಕಾಮ್ಯ ಕಲ್ಪಿತಂಗಳಿಲ್ಲದೆ
ನಿಮ್ಮಿಂದ ನೀವೆ ಸ್ವಯಂಭುವಾಗಿದ್ದಿರ[ಲ್ಲಾ]
ನಿಮ್ಮ ಪರಮಾನಂದದ ಪ್ರಭಾಪರಿಣಾಮದಲ್ಲಿ ಒಂದನಂತಕಾಲವಿದ್ದಿರಲ್ಲಾ
ನಿಮ್ಮಾದ್ಯಂತವ ನೀವೆ ಅರಿವುತಿದ್ದಿರಲ್ಲಾ
ನಿಮ್ಮ ಸ್ವಭಾವದುದಯವ ನೀವೆ ಬಲ್ಲಿರಿ
ಕೂಡಲಸಂಗಮದೇವಾ.