ಕಾಯಕ್ಕೆ ಜೀವಕ್ಕೆ ಸಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯಕ್ಕೆ ಜೀವಕ್ಕೆ ಸಂದು ಮುನ್ನುಳ್ಳಡೆ
ಅದು ಪ್ರಾಣಲಿಂಗವಲ್ಲ ಕಾಣಿರೆ. ಲೋಕಾಚಾರದ ಕೂಳನುಂಡು
ಲೀಲೆಯೊಳಾಡುತಿಹರಲ್ಲದೆ ಸಲೆ ಸಂದವರಪ್ಪರೆ ? ಈ ಕಲ್ಲ ಹಿಡಿದಾತ ಆ ಕಲ್ಲನೆತ್ತ ಬಲ್ಲ ? ಇವರೊಬ್ಬರ ಕರೆದಡೆ ಒಬ್ಬರು (ಇಬ್ಬರು ?) `ಓ' ಎಂಬಂತೆ. ಇವರಿಬ್ಬರ ಭಾವ ಹುರುಳಿಲ್ಲ ಕಾಣಾ ಗುಹೇಶ್ವರಾ.