ಕಾಯಕ್ಲೇಶದಿಂದ ತನುಮನ ಬಳಲಿ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಯಕ್ಲೇಶದಿಂದ ತನುಮನ ಬಳಲಿ ಧನವ ಗಳಿಸಿ ಗುರುಲಿಂಗಜಂಗಮಕ್ಕೆ ವೆಚ್ಚಿಸಿ ದಾಸೋಹವ ಮಾಡುವ ಭಕ್ತನ ಪಾದವ ತೋರಯ್ಯಾ
ನಿಮ್ಮ ಧರ್ಮ. ಅದೇಕೆಂದಡೆ; ಆತನ ತನು ಶುದ್ಧ ಆತನ ಮನ ಶುದ್ಧ. ಆತನ ನಡೆ ನುಡಿ ಪಾವನ. ಆತಂಗೆ ಉಪದೇಶವ ಮಾಡಿದ ಗುರು ನಿರಂಜನ ನಿರಾಮಯ. ಅಂತಹ ಭಕ್ತನ ಕಾಯವೆ ಕೈಲಾಸವೆಂದು ಹೊಕ್ಕು ಲಿಂಗಾರ್ಚನೆಯ ಕಾಡುವ ಜಂಗಮ ಜಗತ್ಪಾವನ. ಇಂತಿವರಿಗೆ ನಮೋ ನಮೋ ಎಂಬೆ ಕೂಡಲಚೆನ್ನಸಂಗಯ್ಯ