ಕಾಯಗುಣ ಕೆಟ್ಟ ಮತ್ತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಯಗುಣ ಕೆಟ್ಟ ಮತ್ತೆ ಅರ್ಚನೆ ಹಿಂಗಿತ್ತು. ಪ್ರಾಣಗುಣ ಕೆಟ್ಟ ಮತ್ತೆ ಅರ್ಪಿತ ಹಿಂಗಿತ್ತು. ಭಾವಗುಣ ಕೆಟ್ಟ ಮತ್ತೆ ಉಭಯ ಜಂಜಡ ಹಿಂಗಿತ್ತು. ಇಂತಾದ ಕಾರಣ_ನಮ್ಮ ಗುಹೇಶ್ವರನ ಶರಣರು ಲಿಂಗಭೋಗೋಪಭೋಗವೆಂಬ ಖಂಡಿತ ಬುದ್ಧಿಯ ಮೀರಿ
ಅಖಂಡಾದ್ವೈತಬ್ರಹ್ಮದಲ್ಲಿ ತಲ್ಲೀಯವಾದರು.