ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಯದ ಕಾರ್ಪಣ್ಯವರತಿತ್ತು
ಕರಣಂಗಳ ಕಳವಳವಳಿದಿತ್ತು. ಮನ ತನ್ನ ತಾರ್ಕಣೆಯ ಕಂಡು ತಳವೆಳಗಾದುದು. ಇನ್ನೇವೆನಿನ್ನೇವೆನಯ್ಯಾ ? ನಿಮ್ಮ ಶರಣ ಬಸವಣ್ಣನ ಶ್ರೀಪಾದವ ಕಂಡಲ್ಲದೆ ಬಯಕೆ ಬಯಲಾಗದು. ಇನ್ನೇವೆನಿನ್ನೇವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?