ಕಾಯದ ಮೊದಲಿಗೆ ಬೀಜವಾವುದೆಂದರಿಯದೀ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಯದ ಮೊದಲಿಗೆ ಬೀಜವಾವುದೆಂದರಿಯದೀ ಲೋಕ. ಇಂದ್ರಿಯಂಗಳು ಬೀಜವಲ್ಲ
ಆ ಕಳಾಭೇದವಲ್ಲ! ಸ್ವಪ್ನ ಬಂದೆರಗಿತ್ತಲ್ಲಾ! ಇದಾವಂಗೂ ಶುದ್ಧ ಸುಯಿಧಾನವಲ್ಲ ಕಾಣಾ ಗುಹೇಶ್ವರಾ.