ವಿಷಯಕ್ಕೆ ಹೋಗು

ಕಾಯದ ಲಜ್ಜೆಯ ಕಲ್ಪಿತವ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಕಾಯದ ಲಜ್ಜೆಯ ಕಲ್ಪಿತವ ಕಳೆದು
ಜೀವದ ಲಜ್ಜೆಯ ಮೋಹವನಳಿದು
ಮನದ ಲಜ್ಜೆಯ ನೆನಹ ಸುಟ್ಟು
ಭಾವದ ಕೂಟ ಬತ್ತಲೆಯೆಂದರಿದು
ತವಕದ ಸ್ನೇಹ ವ್ಯವಹಾರಕ್ಕೆ ಹುಗದು. ಕೂಡಲಸಂಗಮದೇವಯ್ಯಾ
ಎನ್ನ ಹೆತ್ತ ತಾಯಿ ಮಹದೇವಿಕ್ಕನ ನಿಲವ ನೋಡಯ್ಯಾ ಪ್ರಭುವೆ.