ಕಾಯವಿಕಾರ ಕಾಡಿಹುದಯ್ಯಾ, ಮನೋವಿಕಾರ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಯವಿಕಾರ ಕಾಡಿಹುದಯ್ಯಾ
ಮನೋವಿಕಾರ ಕೂಡಿಹುದಯ್ಯಾ. ಇಂದ್ರಿಯ ವಿಕಾರ ಸುಳಿವುದಯ್ಯಾ ! ಸುಳುವಿನೊಳಗೆ ಸುಳಿವುತ್ತಲಿದ್ದೇನೆ
ಸಿಲುಕಿಸದಿರಯ್ಯಾ ! ಅನ್ಯ ಚಿತ್ತದಲ್ಲಿರಿಸದಿರಯ್ಯಾ
ನಿಮ್ಮ ಚಿತ್ತದಲ್ಲಿರಿಸಯ್ಯಾ. ಅನುಪಮಸುಖಸಾರಾಯ ಶರಣರಲ್ಲಿ- ಕೂಡಲಸಂಗಮದೇವಯ್ಯಾ
ಇದನೆ ಬೇಡುವೆನಯ್ಯಾ. 48