ಕಾಯವಿಡಿದು ಹುಟ್ಟಿದಾತ ಕಾಲಾಗ್ನಿರುದ್ರನಾಗಲಿ,

ವಿಕಿಸೋರ್ಸ್ದಿಂದ



Pages   (key to Page Status)   


ಕಾಯವಿಡಿದು ಹುಟ್ಟಿದಾತ ಕಾಲಾಗ್ನಿರುದ್ರನಾಗಲಿ
ಕಾಯವಿಡಿದು ಹುಟ್ಟಿದಾತ ಕಾಮಸಂಹಾರಿಯಾಗಲಿ
ಕಾಯವಿಡಿದು ಹುಟ್ಟಿದಾತ ಅನಾದಿ ಪರಮೇಶ್ವರನಾಗಲಿ
ಅರಿವು ಸಾಧ್ಯವಾಗದು ಆರಿಗೆಯು. ಗುಹೇಶ್ವರಲಿಂಗದಲ್ಲಿ-ನೀನು ಕಾಯವಿಡಿದು ಕಲ್ಪಿತವ ಹೊದ್ದೆಯೆಂಬುದು
ಕಾಣ ಬಂದಿತ್ತು ನೋಡಾ ಚೆನ್ನಬಸವಣ್ಣಾ.