ವಿಷಯಕ್ಕೆ ಹೋಗು

ಕಾಲುಗಳೆಂಬುವು ಗಾಲಿ ಕಂಡಯ್ಯಾ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಲುಗಳೆಂಬುವು ಗಾಲಿ ಕಂಡಯ್ಯಾ ದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ. ಬಂಡಿಯ ಹೊಡೆವರೈವರು ಮಾನಿಸರು
ಒಬ್ಬರಿಗೊಬ್ಬರು ಸಮವಿಲ್ಲಯ್ಯ. ಆದರಿಚ್ಛೆಯನರಿದು ಹೊಡೆಯದಿರ್ದಡೆ
ಅದರಚ್ಚು ಮುರಿಯಿತ್ತು
ಗುಹೇಶ್ವರಾ.