ಕಾಲು ಮುಖವ ತೊಳೆದುಕೊಂಡ ಬಳಿಕ ಮಜ್ಜನಕ್ಕೆರೆವಿರಿ ತಾನು ಲಿಂಗವೊ ? ತನ್ನ ಕೈಯದು ಲಿಂಗವೊ ? ಆವುದು ಲಿಂಗ ಹೇಳಿರೆ ? ಲಿಂಗಸ್ಥಲವನರಿಯದೆ ಎರಡರಿಂದ ಕೆಟ್ಟರು ಗುಹೇಶ್ವರಾ.