ಕಾಲ
_ಕಾಲವರವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲವೈವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ನಾಲ್ವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ಮೂವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ಇಪ್ಪತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ಹತ್ತು; ಕಾಲ ಕಾಲವನೆ ಅರಿವುದು. ಇಂತೀ ಕಾಲಂಗಳ ಕಾಲವನರಿವಡೆ ಗುಹೇಶ್ವರಲಿಂಗದಲ್ಲಿ ಹೇಳು ಚೆನ್ನಬಸವಣ್ಣಾ ?