ಕಾಲ ಕಲ್ಪಿತಂಗಳಿಲ್ಲದೆ ನಿಮ್ಮಿಂದ

ವಿಕಿಸೋರ್ಸ್ದಿಂದ



Pages   (key to Page Status)   


ಕಾಲ ಕಲ್ಪಿತಂಗಳಿಲ್ಲದೆ ನಿಮ್ಮಿಂದ ನೀವೇ ಸ್ವಯಂಭುವಾಗಿರ್ದಿರಯ್ಯಾ. ನಿಮ್ಮ ಪರಮಾನಂದ ಪ್ರಭಾವದ ಪರಿಣಾಮದಲ್ಲಿ ಅನಂತಕಾಲವಿರ್ದಿರಲ್ಲಾ ! ನಿಮ್ಮ ಆದ್ಯಂತವ ನೀವೇ ಅರಿವುತಿದ್ದಿರಲ್ಲಾ
ನಿಮ್ಮ ನಿಜದುದಯವ ನೀವೇ ಬಲ್ಲಿರಿ ಕೂಡಲಚೆನ್ನಸಂಗಮದೇವಾ