ಕಾಳರಕ್ಕಸಿಗೊಬ್ಬ ಮಗ ಹುಟ್ಟಿ,

ವಿಕಿಸೋರ್ಸ್ದಿಂದ



Pages   (key to Page Status)   


ಕಾಳರಕ್ಕಸಿಗೊಬ್ಬ ಮಗ ಹುಟ್ಟಿ
ಕಾಯದ ರಾಶಿಯ ಮೊಗೆವುತ್ತ ಸುರಿವುತ್ತಲಿದ್ದನಯ್ಯಾ ! ಕಾಳರಕ್ಕಸಿಯ ಮೂಗು ಮೊಲೆಯ ಕೊಯ್ದು
ದೇವಕನ್ನಿಕೆಯ ಮೊರೆಹೊಕ್ಕು
ಬಾಯ ತುತ್ತೆಲ್ಲವನು ಉಣಲೊಲ್ಲದೆ ಕಾರಿದಡೆ
ಆತನೆ ಭಕ್ತನೆಂದೆಂಬೆ ಗುಹೇಶ್ವರಾ.