ಕಿಚ್ಚಿನ ದೇವನು, ಕೆಂಡದ

ವಿಕಿಸೋರ್ಸ್ದಿಂದ



Pages   (key to Page Status)   


ಕಿಚ್ಚಿನ ದೇವನು
ಕೆಂಡದ ದೇವನು
ಮಾರಿಯ ದೇವನು
ಮಸಣದ ದೇವನು
ತಿರುಕ ಗೊರವನೆಂದು ಅಲ್ಲಲ್ಲಿ ಒಂದೊಂದನಾಡುತ್ತಿಪ್ಪರಯ್ಯಾ. ನಾ ನಿಮ್ಮ ಪೂಜಿಸಿ ನಷ್ಟಸಂತಾನವಾಗಿ
ಬಟ್ಟಬಯಲಲ್ಲಿ ಬಿದ್ದು ಕೆಟ್ಟೆನು ಗುಹೇಶ್ವರಾ.