ಕಿಚ್ಚು ದೈವವೆಂದು ಹವಿಯನಿಕ್ಕುವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಿಚ್ಚು ದೈವವೆಂದು ಹವಿಯನಿಕ್ಕುವ ಹಾರುವರ ಮನೆಯಲು ಕಿಚ್ಚೆದ್ದು ಸುಡುವಾಗ ಬಚ್ಚಲ ನೀರ
ಬೀದಿಯ ದೂಳ ಹೊಯ್ದು ಬೊಬ್ಬಿಟ್ಟೆಲ್ಲರ ಕರೆವರಯ್ಯಾ. ಕೂಡಲಸಂಗಮದೇವಾ
ವಂದನೆಯ ಮರೆದು ನಿಂದಿಸುತ್ತಿದ್ದರು.