ಕೀರ್ತಿವಾರ್ತೆಗೆ ಮಾಡುವಾತ ಭಕ್ತನಲ್ಲ.

ವಿಕಿಸೋರ್ಸ್ದಿಂದ



Pages   (key to Page Status)   


ಕೀರ್ತಿವಾರ್ತೆಗೆ ಮಾಡುವಾತ ಭಕ್ತನಲ್ಲ. ಪರರ ಬೋಧಿಸಿಕೊಂಡುಂಬಾತ ಜಂಗಮವಲ್ಲ. ತ್ರಿಸಂಧ್ಯಾಕಾಲವೆಂದು ಪ್ರಸಾದವನಿಕ್ಕುವಾತ ಗುರುವಲ್ಲ. ತ್ರಿಸಂಧ್ಯಾಕಾಲವೆಂದು ಪ್ರಸಾದವ ಕೊಂಬಾತ ಶಿಷ್ಯನಲ್ಲ. ಪರಗಮನವಿರಹಿತ ಜಂಗಮ
ಕಾಲಕರ್ಮವಿರಹಿತ ಪ್ರಸಾದಿ
ಪ್ರಸಾದವ ಇಕ್ಕಿಯೂ ಇಕ್ಕದಾತ ಗುರು
ಕೊಂಡೂ ಕೊಳ್ಳದಾತ ಶಿಷ್ಯ. ಆ ಭಕ್ತನಲ್ಲಿಯೆ ನಿಕ್ಷೇಪಿಸಿ ನಿರ್ಗಮನಿಯಾಗಿ ಹೋದಾತ ಜಂಗಮ. ಆ ಜಂಗಮಕ್ಕೆ ಅರ್ಥಪ್ರಾಣಾಭಿಮಾನವಿಡಿದು ಮಾಡುವಾತ ಭಕ್ತ_ ಇಂತೀ ಚತುರ್ವಿಧದನುವನು
ಗುಹೇಶ್ವರಲಿಂಗದನುವನು ವೇಷಧಾರಿಗಳೆತ್ತ ಬಲ್ಲರು ಬಸವಣ್ಣನೊಬ್ಬನೆ ಬಲ್ಲನಲ್ಲದೆ.