ಕುಲದಲಧಿಕನು ಹೋಗಿ ಹೊಲೆಗೇರಿಯಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ಕುಲದಲಧಿಕನು ಹೋಗಿ ಹೊಲೆಗೇರಿಯಲ್ಲಿ ಮನೆಯ ಕಟ್ಟಿದಡೆ
ಕುಲ ಕೆಡದಿಪ್ಪ ಈ ಪರಿಯ ನೋಡಾ ! ಆತನ ಕುಲದವರೆಲ್ಲರು ಮುಖವ ನೋಡಲೊಲ್ಲದಡೆ ಕುಲವುಳ್ಳವರೆಲ್ಲರೂ ಕೈವಿಡಿದರು. ಕುಲಗೆಟ್ಟವನೆಂದು ತಿಳಿದು ವಿಚಾರಿಸಲು
ಹೊಲೆಗೆಟ್ಟು ಹೋಯಿತ್ತು ಕಾಣಾ ಗುಹೇಶ್ವರಾ.