ಕುಲದೊಳಗೆ ಹುಟ್ಟಿ ಕುಲವ

ವಿಕಿಸೋರ್ಸ್ದಿಂದ



Pages   (key to Page Status)   


ಕುಲದೊಳಗೆ ಹುಟ್ಟಿ ಕುಲವ ಬೆರಸದೆ ತಮ್ಮ ನಿಲವ ಬಲಿದಿಪ್ಪವರು ಇನ್ನಾರು ಹೇಳಾ ? ಹಬ್ಬಿದ ಮೂರು ಬೆಟ್ಟಕ್ಕೆ ತನ್ನ ಮನವ ಹಬ್ಬಲೀಯದೆ ಲಿಂಗ ಜಂಗಮಕ್ಕೆ ಸವೆಸಿ ಸ್ವಯಲಿಂಗವಪ್ಪರಿನ್ನಾರು ಹೇಳಾ ? ಸ್ವಯೋ ಲಿಂಗ ಸ್ವಯೋ ಶರಣ ಸ್ವಯೋ ಭೋಗವೆಂದುದಾಗಿ
ಗುಹೇಶ್ವರಾ_ನಿಮ್ಮ ಶರಣ ಸಂಗನಬಸವಣ್ಣಂಗೆ ನಮೋ ನಮೋ ಎಂಬೆನು.