ಕುಲಹೀನ ಶಿಷ್ಯಂಗೆ ಅನುಗ್ರಹವ

ವಿಕಿಸೋರ್ಸ್ದಿಂದ



Pages   (key to Page Status)   


ಕುಲಹೀನ ಶಿಷ್ಯಂಗೆ ಅನುಗ್ರಹವ ಕೊಟ್ಟು ತನ್ನ ಪ್ರಾಣಲಿಂಗವ ನಿಕ್ಷೇಪಿಸಿ
ಕರ್ಣಮಂತ್ರವ ಹೇಳಿ
ಆ ಗುರು ಬಂದು ಆ ಶಿಷ್ಯನ ಮನೆಯ ಹೊಗಲೊಲ್ಲದೆ ಅಕ್ಕಿ ತುಪ್ಪವನೀಸಿಕೊಂಬವನ ಕೇಡಿಂಗೆ ಇನ್ನೇವೆನಯ್ಯಾ ? ತನ್ನ ಪ್ರಾಣಲಿಂಗವನವನಿಗೆ ಕೊಟ್ಟು ತಾ ಹುಗೆನೆಂಬ ವ್ರತಗೇಡಿಯ ಇನ್ನೇನೆನಬಹುದಯ್ಯಾ ? ಅವನ ಧನಕ್ಕೆ ತಂದೆಯಾದನಲ್ಲದೆ ಅವನಿಗೆ ತಂದೆಯಾದುದಿಲ್ಲ. ಇದು ಕಾರಣ-ಕೂಡಲಚೆನ್ನಸಂಗಯ್ಯಾ ಆ ಲಿಂಗವ ಮಾರಿಕೊಂಡುಂಬ ಭಂಗಕಾರರು ಕೆಟ್ಟಕೇಡನೇನೆಂಬೆನಯ್ಯಾ !