ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು ಕೆಳದಿ ? ಒಚ್ಚೊತ್ತಗಲಿದಡೆ ಕಾಣದಿರಲಾರೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನನಗಲಿಯಗಲದ ಸುಖವೆಂದಪ್ಪುದೊ ?