ಕೂರ್ಮನ ಶಿಶುವಿನ ಸ್ನೇಹದಂತಿರಬೇಡಾ

ವಿಕಿಸೋರ್ಸ್ದಿಂದ



Pages   (key to Page Status)   


ಕೂರ್ಮನ ಶಿಶುವಿನ ಸ್ನೇಹದಂತಿರಬೇಡಾ ಸಂಗನಬಸವಣ್ಣಾ ? ಕಾಕಪಿಕಸಂಧಾನದಂತಿರಬೇಡಾ ಸಂಗನಬಸವಣ್ಣಾ ? ಕೊಂಬ ತಪ್ಪದೆ ಹಾಯ್ವ ಕಪಿಯಂತಿರಬೇಡಾ ಸಂಗನಬಸವಣ್ಣಾ ? ನೀರು ಕ್ಷೀರವ ಭೇದಿಸಿ ತೆಗೆವ ಹಂಸೆಯಂತಿರಬೇಡಾ ಸಂಗನಬಸವಣ್ಣಾ ? ಗುಹೇಶ್ವರಲಿಂಗದಲ್ಲಿ ಅವಧಾನ ತಪ್ಪಿ
ಮರಳಿ ಅರಸಿದಡುಂಟೆ ಹೇಳಾ ಸಂಗನಬಸವಣ್ಣಾ ?