ವಿಷಯಕ್ಕೆ ಹೋಗು

ಕೆಂಡದ ಮಳೆ ಕರೆವಲ್ಲಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕೆಂಡದ ಮಳೆ ಕರೆವಲ್ಲಿ ಉದಕವಾಗಿರಬೇಕು. ಜಲಪ್ರಳಯವಾದಲ್ಲಿ ವಾಯುವಿನಂತಿರಬೇಕು. ಮಹಾಪ್ರಳಯವಾದಲ್ಲಿ ಆಕಾಶದಂತಿರಬೇಕು. ಜಗತ್‍ಪ್ರಳಯವಾದಲ್ಲಿ ತನ್ನ ತಾ ಬಿಡಬೇಕು
ಗುಹೇಶ್ವರನೆಂಬ ಲಿಂಗ ತಾನಾಗಿರಬೇಕು.