ಕೆಚ್ಚಿಲ್ಲದ ಮರನ ಕ್ರಿಮಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ
ಒಡೆಯನಿಲ್ಲದ ಮನೆಯ ಶುನಕ ಸಂಚುಗೊಂಬಂತೆ
ನೃಪತಿಯಿಲ್ಲದ ದೇಶವ ಮನ್ನೆಯರಿಂಬುಗೊಂಬಂತೆ
ನಿಮ್ಮ ನೆನಹಿಲ್ಲದ ಶರೀರವ ಭೂತ ಪ್ರೇತ ಪಿಶಾಚಿಗಳಿಂಬುಗೊಂಬಂತೆ ಚೆನ್ನಮಲ್ಲಿಕಾರ್ಜುನಾ.