ಕೆಟ್ಟ ಒಡವೆಯನರಸ ಹೋಗಿ,

ವಿಕಿಸೋರ್ಸ್ದಿಂದ



Pages   (key to Page Status)   


ಕೆಟ್ಟ ಒಡವೆಯನರಸ ಹೋಗಿ
ಆ ಕೆಟ್ಟ ಒಡವೆಯ ಕಂಡ ಬಳಿಕ
ಆರನೂ ಕೇಳಲಿಲ್ಲ ಹೇಳಲಿಲ್ಲ
ಅದು ಮುನ್ನಲಿದ್ದ ಹಾಂಗೆ ಆಯಿತ್ತು. ಅಂತು ಶರಣನು ಆ ಪರಿಯಲೆ ತನ್ನ ಸ್ವಯಾನುಭಾವದಿಂದ ತನ್ನ ನಿಜವ ತಾ ಕಂಡು ಸೈವೆರಗಾಗಿರಲು
ಅದನ್ನು ಅಜ್ಞಾನಿಗಳು ಬಲ್ಲರೆ ಗುಹೇಶ್ವರಾ ?