ಕೈಯಲ್ಲಿ ಡಾಣೆ ಮನದಲ್ಲಿ ಕ್ರೋಧ ವಚನದಲ್ಲಿ ಕಿಂಕಲ
ಲಿಂಗದ ವಾರ್ತೆ ನಿನಗೇಕೆ ಹೇಳಾ ಬಸವಾ ? ಜಂಗಮವೆ ಲಿಂಗವೆಂಬ ಶಬ್ದಸಂದೇಹಸೂತಕಿ ನೀನು
ಸಜ್ಜನ ಸದ್ಭಕ್ತಿಯ ಮಾತು ನಿನಗೇಕೆ ಹೇಳಾ ಬಸವಾ ? ಕಬ್ಬುನದ ರೂಪು ಪರುಷವ ಮುಟ್ಟಿದಡೆ ಹೊನ್ನಾಯಿತ್ತಲ್ಲದೆ ಪರುಷವಪ್ಪುದೆ ಹೇಳಾ ಬಸವಾ ? ಗುಹೇಶ್ವರನೆಂಬ ಪರುಷದ ಪುತ್ಥಳಿಯನರಿಯಬಲ್ಲಡೆ ನಿನ್ನ ನೀನೆ ತಿಳಿದು ನೋಡಾ ಸಂಗನಬಸವಣ್ಣಾ.