ಕೈಸಿರಿಯ ದಂಡವ ಕೊಳಬಹುದಲ್ಲದೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೈಸಿರಿಯ ದಂಡವ ಕೊಳಬಹುದಲ್ಲದೆ
ಮೈಸಿರಿಯ ದಂಡವ ಕೊಳಲುಂಟೆ ? ಉಟ್ಟಂತಹ ಉಡಿಗೆ ತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ
ಮುಚ್ಚಿರ್ದ ಮುಸುಕಿರ್ದ ನಿರ್ವಾಣವ ಸೆಳೆದುಕೊಳಬಹುದೆ ? ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ ಉಡುಗೆ ತೊಡುಗೆಯ ಹಂಗೇಕೋ ಮರುಳೆ ?