ವಿಷಯಕ್ಕೆ ಹೋಗು

ಕೊಂಕಣ ದ್ವೀಪದಲ್ಲಿ ಒಂದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕೊಂಕಣ ದ್ವೀಪದಲ್ಲಿ ಒಂದು ಕಪಿ ಹುಟ್ಟಿತ್ತು ತಪವ ಮಾಡುವ ಸಪ್ತ ಋಷಿಯರ ನುಂಗಿತ್ತು ನವನಾಥಸಿದ್ಧರ ತೊತ್ತಳದುಳಿಯಿತ್ತು
ಅರುಹಿರಿಯರ ತಲೆಯ ಮೆಟ್ಟಿ ಅರಿಯಿತ್ತು. ಕಪಿಜನ ವೈರಿ ಸರ್ಪನ ಹೇಳಿಗೆಯಲ್ಲಿ ನಿದ್ರೆಗೆಯ್ಯಿತ್ತು. ಯೋಗಿಗಳ ಭೋಗಿಗಳ ಕೊಲ್ಲದ ಕೊಲೆಯ ಕೊಂದಿತ್ತು. ಕಾಮನ ಅರೆಯ ಮೆಟ್ಟಿ ಕೂಗಿತ್ತು
ಕೋಳಿಯ ಹಂಜರನನಾಸಿಕ ಬೆಕ್ಕ ನುಂಗಿತ್ತು
ಕೋಳಿಯ ಅರ್ಕಜದ ಅರಿವನರಿವ ಅರುಹಿರಿಯರ ಮಿಕ್ಕು ; ಭಾವಸೊಕ್ಕನುಂಡು ಕೊಕ್ಕರನಾಯಿತ್ತು. ಹಿಂದಿರ್ದ ಕೋಳಿಯ ಕೊಕ್ಕರನ ಕಪಿಯ
ಭಾವವ ಅರಿಯದಿರ್ದ ಕಾರಣ_ ಕೆದರಿದ ಚರಣ ಉಡುಗಿ
ಮರಣವರಿಯದೆ
ಕರಣದೇಹತ್ವವಿಲ್ಲದೆ
ಲಿಂಗೈಕ್ಯ_ತಾನೆ ಪ್ರಾಣ ಪುರುಷ. ಇದನರಿದು ನುಂಗಿದಾತನೆ ಪರಮಶಿವಯೋಗಿ_ ಭಂಗವರಿಯದ
ಜನನದ ಹೊಲಬರಿಯದ
ಭಾವದ ಜೀವವರಿಯದ ! _ಇದು ಕಾರಣ ನಿಮ್ಮ ಶರಣನು ಲಿಂಗಸ್ವಯಶಕ್ತಿಶರಣ ತಾನೆ.