ಕೊಲ್ಲೆನಯ್ಯಾ ಪ್ರಾಣಿಗಳ, ಮೆಲ್ಲೆನಯ್ಯಾ

ವಿಕಿಸೋರ್ಸ್ದಿಂದ


Pages   (key to Page Status)   

ಕೊಲ್ಲೆನಯ್ಯಾ ಪ್ರಾಣಿಗಳ
ಮೆಲ್ಲೆನಯ್ಯಾ ಬಾಯಿಚ್ಛೆಗೆ
ಒಲ್ಲೆನಯ್ಯಾ ಪರಸತಿಯರ ಸಂಗವ
ಬಲ್ಲೆನಯ್ಯಾ ಮುಂದೆ ತೊಡಕುಂಟೆಂಬುದ. ಬಳ್ಳದ ಬಾಯಂತೆ ಒಂದೆ ಮನ ಮಾಡಿ ನಿಲ್ಲೆಂದು ನಿಲಿಸಯ್ಯಾ
ಕೂಡಲಸಂಗಮದೇವಾ.