ಕೊಳಲ ದನಿಗೆ ಸರ್ಪ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೊಳಲ ದನಿಗೆ ಸರ್ಪ ತಲೆದೂಗಿದಡೇನು
ಒಳಗಣ ವಿಷದ ಬಯಕೆ ಬಿಡದನ್ನಕ್ಕ ? ಹಾಡಿದಡೇನು
ಕೇಳಿದಡೇನು
ತನ್ನಲುಳ್ಳ ಅವಗುಣ ಬಿಡದನ್ನಕ್ಕ ? ಒಳಗನರಿದು ಹೊರಗೆ ಮರೆದವರ ನೀ ಎನಗೆ ತೋರಯ್ಯಾ ಚೆನ್ನಮಲ್ಲಿಕಾರ್ಜುನಾ.