ಕೋಣನ ಹೇರಿಂಗೆ ಕುನ್ನಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೋಣನ ಹೇರಿಂಗೆ ಕುನ್ನಿ ಬಸುಕುತ್ತಬಡುವಂತೆ ತಾವೂ ನಂಬರು
ನಂಬುವರನೂ ನಂಬಲೀಯರು
ತಾವೂ ಮಾಡರು
ಮಾಡುವರನೂ ಮಾಡಲೀಯರು. ಮಾಡುವ ಭಕ್ತರ ಕಂಡು ಸೈರಿಸಲಾರದವರ
ಕೂಗಿಡೆ ಕೂಗಿಡೆ
ನರಕದಲ್ಲಿಕ್ಕುವ ಕೂಡಲಸಂಗಮದೇವ.