ಕ್ರಿಯಾಮಥನವಿಲ್ಲದೆ ಕಾಣಬಂದುದೆ ಇಕ್ಷುವಿನೊಳಗಣ ಮಧುರ ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ತಿಲದೊಳಗಣ ತೈಲ ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ಕ್ಷೀರದೊಳಗಣ ಘೃತ ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ಕಾಷ*ದೊಳಗಣ ಅಗ್ನಿ ? ಇದು ಕಾರಣ
ನಮ್ಮ ಗುಹೇಶ್ವರಲಿಂಗವ ತನ್ನೊಳರಿದೆನೆಂಬ ಮಹಂತಂಗೆ ಸತ್‍ಕ್ರಿಯಾಚರಣೆಯೆ ಸಾಧನ ಕಾಣಿಭೋ.