ವಿಷಯಕ್ಕೆ ಹೋಗು

ಕ್ರಿಯಾಸ್ವರೂಪವೇ ಲಿಂಗವೆಂದು, ಜಾÕನಸ್ವರೂಪವೇ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕ್ರಿಯಾಸ್ವರೂಪವೇ ಲಿಂಗವೆಂದು
ಜಾÕನಸ್ವರೂಪವೇ ಜಂಗಮವೆಂದು
ಜಾÕನಸ್ವರೂಪವಪ್ಪ ಜಂಗಮದ ಪ್ರಸನ್ನೇತಿ ಪ್ರಸಾದ ಲಿಂಗಕ್ಕೆ ಜೀವಕಳೆಯೆಂದೆ. ಜ್ಯೋತಿ ಕರ್ಪೂರವ ನೆರೆದಂತೆ
ಅಂಗ ಲಿಂಗದಲ್ಲಡಗಿತ್ತು. ದೀಪ ದೀಪವ ಬೆರಸಿದಂತೆ ಪ್ರಾಣ ಜಂಗಮದಲ್ಲಿ ಅಡಗಿತ್ತು. ಈ ಕ್ರಿಯಾ ಜಾÕನ ಭಾವ ನಿರವಯವಾದವಾಗಿ ಲಿಂಗವೆನ್ನೆ
ಜಂಗಮವೆನ್ನೆ ಪ್ರಸಾದವೆನ್ನೆ ಇದುಕಾರಣ
ಕೊಟ್ಟೆನೆಂಬುದೂ ಇಲ್ಲ
ಕೊಂಡೆನೆಂಬುದೂ ಇಲ್ಲ. ಕೊಡುವುದು ಕೊಂಬುದು ಎರಡೂ ನಿರ್ಲೇಪವಾದ ಬಳಿಕ ನಾನೆಂಬುದೂ ನೀನೆಂಬುದೂ
ಏನು ಏನುಯೆಂಬೂದಕ್ಕೆ ತೆರಹಿಲ್ಲದೆ
ಪರಿಪೂರ್ಣ ಸರ್ವಮಯನಾದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.