ಕ್ರಿಯೆಗಳು ಮುಟ್ಟಲರಿಯವು, ನಿಮ್ಮನೆಂತು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕ್ರಿಯೆಗಳು ಮುಟ್ಟಲರಿಯವು
ನಿಮ್ಮನೆಂತು ಪೂಜಿಸುವೆ ? ನಾದ ಬಿಂದುಗಳು ಮುಟ್ಟಲರಿಯವು
ನಿಮ್ಮನೆಂತು ಹಾಡುವೆ ? ಕಾಯ ಮುಟ್ಟುವಡೆ ಕಾಣಬಾರದ ಘನವು
ನಿಮ್ಮನೆಂತು ಕರಸ್ಥಲದಲ್ಲಿ ಧರಿಸುವೆ ? ಚೆನ್ನಮಲ್ಲಿಕಾರ್ಜುನಯ್ಯಾ
ನಾನೇನೆಂದರಿಯದೆ ನಿಮ್ಮ ನೋಡಿ ನೋಡಿ ಸೈವೆರಗಾಗುತಿರ್ದೆನು.