ಕ್ರಿಯೆಯಿಲ್ಲದ ಭಕ್ತ ಮನುಜ,

ವಿಕಿಸೋರ್ಸ್ದಿಂದ



Pages   (key to Page Status)   


ಕ್ರಿಯೆಯಿಲ್ಲದ ಭಕ್ತ ಮನುಜ
ಕ್ರಿಯೆಯಿಲ್ಲದ ಮಹೇಶ ರಾಕ್ಷಸ
ಕ್ರಿಯೆಯಿಲ್ಲದ ಪ್ರಸಾದಿ ಯವನ
ಕ್ರಿಯೆಯಿಲ್ಲದ ಪ್ರಾಣಲಿಂಗಿ ಭವಿ
ಕ್ರಿಯೆಯಿಲ್ಲದ ಶರಣ ಅಜ್ಞಾನಿ
ಕ್ರಿಯೆಯಿಲ್ಲದ ಲಿಂಗೈಕ್ಯ ಜನನಕ್ಕೊಳಗು ನೋಡಾ
ಕೂಡಲಚೆನ್ನಸಂಗಮದೇವಾ.