ಕ್ಷೀರಸಾಗರದೊಳಗಿರ್ದ ಹಂಸೆಗೆ ಹಾಲ

ವಿಕಿಸೋರ್ಸ್ದಿಂದ



Pages   (key to Page Status)   


ಕ್ಷೀರಸಾಗರದೊಳಗಿರ್ದ ಹಂಸೆಗೆ ಹಾಲ ಬಯಸಲುಂಟೆ ? ಪುಷ್ಪದೊಳಗಿರ್ದ ತುಂಬಿಗೆ ಪರಿಮಳವನರಸಲುಂಟೆ ? ತಾವು ಲಿಂಗದೊಳಗಿರ್ದು
ಬೇರೆ ಇತರ ಕಾಮ್ಯಾರ್ಥದೊಳಗಿರ್ಪ ಭ್ರಾಂತರನೇನೆಂಬೆನಯ್ಯಾ ಗುಹೇಶ್ವರಾ.