ಗಂಡಂಗೆ ನಾಚಿದ ಹೆಂಡತಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಂಡಂಗೆ ನಾಚಿದ ಹೆಂಡತಿ ಮಕ್ಕಳ ಹೇಂಗೆ ಹಡೆವಳಯ್ಯ? ಲಿಂಗಕ್ಕ ನಾಚಿದಾತ ಶರಣನೆಂತಪ್ಪನಯ್ಯ? ಈ ಲಜ್ಜೆ ನಾಚಿಕೆಯೆಂಬ ಪಾಶವಿದೇನಯ್ಯ? ಸಂಕಲ್ಪ ವಿಕಲ್ಪದಿಂದ ಸಂದೇಹಿಸುವ ಭ್ರಾಂತಿಯೇ ಲಜ್ಜೆಯಯ್ಯ. ಅಹುದೋ ಅಲ್ಲವೋ
ಏನೋ ಎಂತೋ ಎಂದು ಹಿಡಿವುತ್ತ ಬಿಡುತ್ತಿಪ್ಪ ಲಜ್ಜಾಭ್ರಾಂತಿ ಉಡುಗಿರಬೇಕಯ್ಯ. ಗಂಡನ ಕುರುಹನರಿಯದಾಕೆಗೆ ಲಜ್ಜೆ
ನಾಚಿಕೆ ಉಂಟಾದುದಯ್ಯ. ಲಿಂಗವನರಿಯದಾತಂಗೆ ಸಂಕಲ್ಪ ವಿಕಲ್ಪವೆಂಬ ಸಂದೇಹ ಭ್ರಾಂತಿ ಉಂಟಾದುದಯ್ಯ. ಈ ಅರುಹು ಮರಹೆಂಬುಭಯದ ಮುಸುಕ ತೆಗೆದು ನೆರೆ ಅರುಹಿನಲ್ಲಿ ಸನ್ನಿಹಿತವಿಲ್ಲದ ಜಡರುಗಳ ಕೈಯಲ್ಲಿ ಲಿಂಗಾನುಭಾವವ ಬೆಸಗೊಳಲುಂಟೆ ಅಯ್ಯಾ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.