Library-logo-blue-outline.png
View-refresh.svg
Transclusion_Status_Detection_Tool

ಗಗನದ ಗುಂಪ ಚಂದ್ರಮ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಗಗನದ ಗುಂಪ ಚಂದ್ರಮ ಬಲ್ಲುದಲ್ಲದೆ
ಕಡೆಯಲಿದ್ದಾಡುವ ಹದ್ದು ಬಲ್ಲುದೆ ಅಯ್ಯಾ ? ನದಿಯ ಗುಂಪ ತಾವರೆ ಬಲ್ಲುದಲ್ಲದೆ
ಕಡೆಯಲಿದ್ದ ಹೊನ್ನಾವರಿಕೆ ಬಲ್ಲುದೆ ಅಯ್ಯಾ ? ಪುಷ್ಪದ ಪರಿಮಳವ ತುಂಬಿ ಬಲ್ಲುದಲ್ಲದೆ
ಕಡೆಯಲಿದ್ದಾಡುವ ನೊರಜು ಬಲ್ಲುದೆ ಅಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣರ ನಿಲವ ನೀವೆ ಬಲ್ಲಿರಲ್ಲದೆ
ಈ ಕೋಣನ ಮೈಮೇಲಣ ಸೊಳ್ಳೆಗಳೆತ್ತ ಬಲ್ಲವಯ್ಯಾ ?