ಗತಿಗೆಟ್ಟೆ ಧೃತಿಗೆಟ್ಟೆ ಮತಿಗೆಟ್ಟೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗತಿಗೆಟ್ಟೆ ಧೃತಿಗೆಟ್ಟೆ ಮತಿಗೆಟ್ಟೆ ನಾನಯ್ಯಾ. ನಡೆವಡೆ ಶಕ್ತಿಯಿಲ್ಲ ನುಡಿವಡೆ ಜಿಹ್ವೆಯಿಲ್ಲ. ಇದಿರಲೊಬ್ಬರ ಉಪಚಾರ ಸೇರದು ನೋಡಾ ಎಮಗೆ. ಬಂದ ಬರವನರಿದು ನಿಂದ ನಿಲವನರಿದು ಕೂಡಬಲ್ಲ ಶರಣಂಗೆ
ಬೇರೊಂದು ಏಕಾಂತವೆಂಬ ಸಂದೇಹ ಉಂಟೆ ? ತೆರಹಿಲ್ಲದ ಘನವನೊಳಕೊಂಡ ಬಳಿಕ ಬರಲೆಡೆಯುಂಟೆ ನಮ್ಮ ಗುಹೇಶ್ವರಲಿಂಗಕ್ಕೆ ?