ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ? ಕೊಳಕ್ಕಲ್ಲದೆ ಕಿರುವಳ್ಳಕ್ಕೆಳಸುವುದೆ ಹಂಸೆ ? ಮಾಮರ ತಳಿತಲ್ಲದೆ ಸರಗೈವುದೆ ಕೋಗಿಲೆ ? ಪರಿಮಳವಿಲ್ಲದ ಪುಷ್ಪಕ್ಕೆಳಸುವುದೆ ಭ್ರಮರ ? ಎನ್ನ ದೇವ ಚೆನ್ನಮಲ್ಲಿಕಾರ್ಜುನಂಗಲ್ಲದೆ ಅನ್ಯಕ್ಕೆಳಸುವುದೆ ಎನ್ನ ಮನ ? ಪೇಳಿರೆ
ಕೆಳದಿಯರಿರಾ ?